Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:7 - ಪರಿಶುದ್ದ ಬೈಬಲ್‌

7 ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:7
28 ತಿಳಿವುಗಳ ಹೋಲಿಕೆ  

ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.


ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.


ಬೇರೆ ಕುಲದವರಂತೆ ಅವರಿಗೆ ಭೂಮಿ ದೊರೆಯುವುದಿಲ್ಲ. ದೇವರು ಹೇಳಿದ ಪ್ರಕಾರ ಅವರ ಪಾಲು ಯೆಹೋವನೇ.


ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.


ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’”


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಅವರು ನನ್ನ ಪವಿತ್ರಸ್ಥಳವನ್ನು ಪ್ರವೇಶಿಸುವರು. ನನ್ನ ಮೇಜಿನ ಬಳಿಗೆ ನನಗೆ ಸೇವೆಮಾಡಲು ಬರುವರು. ನಾನು ಅವರಿಗೆ ವಹಿಸಿರುವ ವಸ್ತುಗಳನ್ನು ಪರಾಂಬರಿಸುವರು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು