ಅರಣ್ಯಕಾಂಡ 18:8 - ಪರಿಶುದ್ದ ಬೈಬಲ್8 ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.
ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”