ಅರಣ್ಯಕಾಂಡ 18:9 - ಪರಿಶುದ್ದ ಬೈಬಲ್9 ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.