Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:13 - ಪರಿಶುದ್ದ ಬೈಬಲ್‌

13 ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:13
27 ತಿಳಿವುಗಳ ಹೋಲಿಕೆ  

“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”


ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!


ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ತಪ್ಪು ಮಾಡುತ್ತಿರುವವನು ತಪ್ಪುಮಾಡುತ್ತಲೇ ಮುಂದುವರಿಯಲು ಬಿಡು. ಅಶುದ್ಧನಾದವನು ಅಶುದ್ಧತೆಯಲ್ಲೇ ಮುಂದುವರಿಯಲು ಬಿಡು. ಯೋಗ್ಯವಾದುದನ್ನು ಮಾಡುವವನು ಯೋಗ್ಯವಾದುದನ್ನೇ ಮಾಡಲಿ. ಪರಿಶುದ್ಧನಾಗಿರುವವನು ಪರಿಶುದ್ಧನಾಗಿಯೇ ಇರಲಿ” ಎಂದು ಹೇಳಿದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.


“ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಆ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


“ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


“ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು.


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು