Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:16 - ಪರಿಶುದ್ದ ಬೈಬಲ್‌

16 ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:16
12 ತಿಳಿವುಗಳ ಹೋಲಿಕೆ  

“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.


ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.


ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”


ಯಾವನಾದರೂ ಮನುಷ್ಯನ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.


ಮತ್ತು ಮುಚ್ಚಳವಿಲ್ಲದಿರುವ ಪ್ರತಿಯೊಂದು ಪಾತ್ರೆಯೂ ಅಶುದ್ಧವಾಗಿರುವುದು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


“ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಯಾವ ಶವದ ಬಳಿಗೆ ಹೋಗಕೂಡದು.


ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,


ಆ ಯಾಜಕನು ತನ್ನನ್ನು ಶುದ್ಧ ಮಾಡಿಕೊಂಡ ತರುವಾಯ ತಾನು ಏಳು ದಿವಸ ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು