ಅರಣ್ಯಕಾಂಡ 19:19 - ಪರಿಶುದ್ದ ಬೈಬಲ್19 “ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು. ಅಧ್ಯಾಯವನ್ನು ನೋಡಿ |