Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:2 - ಪರಿಶುದ್ದ ಬೈಬಲ್‌

2 “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನಾದ ನಾನು ಒಂದು ವಿಧಿಯನ್ನು ನೇವಿುಸಿದ್ದೇನೆ; ಅದೇನಂದರೆ - ಎಂದೂ ನೊಗವನ್ನು ಹೊರದ ಮತ್ತು ಯಾವ ಕುಂದು ಕೊರತೆಯೂ ಇಲ್ಲದ ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:2
21 ತಿಳಿವುಗಳ ಹೋಲಿಕೆ  

ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


“ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


“ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:


ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.


ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಯೆಹೋವನು ಮೋಶೆ ಮತ್ತು ಆರೋನರೊಡನೆ ಮಾತಾಡಿ ಹೀಗೆಂದನು:


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು