Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:2 - ಪರಿಶುದ್ದ ಬೈಬಲ್‌

2 “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರೆಲ್ಲರೂ ದೇವದರ್ಶನದ ಗುಡಾರದ ಸುತ್ತಲು ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:2
23 ತಿಳಿವುಗಳ ಹೋಲಿಕೆ  

ಆದರೆ ಪ್ರತಿಯೊಂದನ್ನೂ ಸರಿಯಾದ ರೀತಿಯಲ್ಲಿ ಮತ್ತು ಕ್ರಮಬದ್ಧವಾಗಿ ಮಾಡಿರಿ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.


ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.


ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು.


ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.


“ರೂಬೇನ್ ಕುಲ ಮತ್ತು ಅದರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿನುಸಾರವಾಗಿ ಪಾಳೆಯಮಾಡಿಕೊಳ್ಳಬೇಕು. ರೂಬೇನ್ ಕುಲದವರ ನಾಯಕನು ಶೆದೇಯೂರನ ಮಗನಾದ ಎಲೀಚೂರನು;


“ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು