ಅರಣ್ಯಕಾಂಡ 20:10 - ಪರಿಶುದ್ದ ಬೈಬಲ್10 ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆರೋನನ ಜೊತೆಯಲ್ಲಿ ಜನಸಮೂಹದವರ ಬಳಿಗೆ ಹೋಗಿ ಕಡಿದಾದ ಆ ಬಂಡೆಗೆದುರಾಗಿ ಅವರನ್ನು ಸಭೆಸೇರಿಸಿದನು. ಅವರನ್ನು ಸಂಬೋಧಿಸುತ್ತಾ, “ದಂಗೆಕಾರರೇ ಕೇಳಿ; ಈ ಬಂಡೆಯಿಂದ ನಿಮಗೆ ನಾವು ನೀರನ್ನು ಬರಮಾಡಬೇಕೋ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆರೋನನ ಜೊತೆಯಲ್ಲಿ ಸಮೂಹದವರನ್ನು ಆ ಕಡಿದಾದ ಬಂಡೆಗೆದುರಾಗಿ ಕೂಡಿಸಿ ಅವರಿಗೆ - ದ್ರೋಹಿಗಳೇ, ಕೇಳಿರಿ; ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು. ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.