ಅರಣ್ಯಕಾಂಡ 20:16 - ಪರಿಶುದ್ದ ಬೈಬಲ್16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!