Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:19 - ಪರಿಶುದ್ದ ಬೈಬಲ್‌

19 ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಇಸ್ರಯೇಲರು, “ನಾವು ರಾಜಮಾರ್ಗದಲ್ಲೇ ಹೋಗುತ್ತೇವೆ. ನಾವಾಗಲಿ, ನಮ್ಮ ಜಾನುವಾರುಗಳಾಗಲಿ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುತ್ತೇವೆ. ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿಹೋಗುವುದಕ್ಕೆ ಮಾತ್ರ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಇಸ್ರಾಯೇಲ್ಯರು - ನಾವು ರಾಜಮಾರ್ಗದಲ್ಲಿಯೇ ಹೋಗುವೆವು; ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆಕೊಡುವೆವು; ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಇಸ್ರಾಯೇಲರು ಅವನಿಗೆ, “ನಾವು ರಾಜಮಾರ್ಗದಲ್ಲಿ ಹೋಗುತ್ತೇವೆ. ನಮ್ಮ ಪಶುಗಳು ನಿನ್ನ ನೀರು ಕುಡಿದರೆ, ಅದರ ಕ್ರಯವನ್ನು ಕೊಡುತ್ತೇವೆ. ನಮ್ಮ ಕಾಲುಗಳಿಂದ ದಾಟಿ ಹೋಗುವುದೇ ಹೊರತು ಮತ್ತೇನೂ ಮಾಡುವುದಿಲ್ಲ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:19
4 ತಿಳಿವುಗಳ ಹೋಲಿಕೆ  

ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.


ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು.


ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ಹಸುಗಳು ಬೇತ್‌ಷೆಮೆಷಿಗೆ ನೇರವಾಗಿ ಹೋದವು. ಅವು ದಾರಿಯಲ್ಲಿಯೇ ಹೋದವು. ಅವು ದಾರಿಯುದ್ದಕ್ಕೂ ಕೂಗುತ್ತಾ ನಡೆದವು. ಅವು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯರ ಅಧಿಪತಿಗಳು ಬೇತ್‌ಷೆಮೆಷಿನ ಗಡಿಯವರೆಗೂ ಹಸುಗಳನ್ನು ಹಿಂಬಾಲಿಸಿಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು