ಅರಣ್ಯಕಾಂಡ 20:20 - ಪರಿಶುದ್ದ ಬೈಬಲ್20 ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ಎದೋಮ್ಯರು - ನೀವು ದಾಟಿಲೇಬಾರದು ಎಂದು ಉತ್ತರ ಕೊಟ್ಟು ಬಹುಜನ ಕೂಡಿಕೊಂಡು ಬಲಾತ್ಕಾರದಿಂದ ಎದುರಿಸುವವರಾಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು. ಅಧ್ಯಾಯವನ್ನು ನೋಡಿ |
ಅವರು ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ಪ್ರದೇಶವನ್ನು ದಾಟಿಹೋಗುವುದಕ್ಕೆ ದಯವಿಟ್ಟು ಅನುಮತಿಕೊಡು’ ಎಂದು ಕೇಳಿಕೊಂಡರು. ಆದರೆ ಎದೋಮಿನ ಅರಸನು ಅವರಿಗೆ ತಮ್ಮ ದೇಶವನ್ನು ದಾಟಿಹೋಗಲು ಅನುಮತಿಕೊಡಲಿಲ್ಲ. ತರುವಾಯ ಅವರು ಮೋವಾಬ್ಯರ ಅರಸನ ಬಳಿಗೆ ಅದೇ ಸಂದೇಶವನ್ನು ಕಳುಹಿಸಿದರು. ಆದರೆ ಮೋವಾಬ್ಯರ ಅರಸನು ಸಹ ಅವರಿಗೆ ಅವರ ದೇಶವನ್ನು ದಾಟಿಹೋಗಲು ಅನುಮತಿ ಕೊಡಲಿಲ್ಲ. ಆದ್ದರಿಂದ ಇಸ್ರೇಲರು ಕಾದೇಶಿನಲ್ಲಿ ನೆಲೆನಿಂತರು.