Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:28 - ಪರಿಶುದ್ದ ಬೈಬಲ್‌

28 ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದುಬಿಟ್ಟು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:28
22 ತಿಳಿವುಗಳ ಹೋಲಿಕೆ  

(ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.


ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.


ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು.


ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.


ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರೆಲ್ಲರೂ ನೋಡಿದರು.


ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.


ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು