ಅರಣ್ಯಕಾಂಡ 20:6 - ಪರಿಶುದ್ದ ಬೈಬಲ್6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಲಿಗೆ ಹೋಗಿ ಅಡ್ಡಬೀಳಲಾಗಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು. ಅಧ್ಯಾಯವನ್ನು ನೋಡಿ |