ಅರಣ್ಯಕಾಂಡ 20:8 - ಪರಿಶುದ್ದ ಬೈಬಲ್8 “ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |