Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:1 - ಪರಿಶುದ್ದ ಬೈಬಲ್‌

1 ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:1
10 ತಿಳಿವುಗಳ ಹೋಲಿಕೆ  

ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು.


ಹೊರ್ಮದ ಅರಸ ಅರಾದಿನ ಅರಸ


“ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.


ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.


ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು