ಅರಣ್ಯಕಾಂಡ 21:16 - ಪರಿಶುದ್ದ ಬೈಬಲ್16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ. ಅಧ್ಯಾಯವನ್ನು ನೋಡಿ |