ಅರಣ್ಯಕಾಂಡ 21:23 - ಪರಿಶುದ್ದ ಬೈಬಲ್23 ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಸೀಹೋನನು ತನ್ನ ನಾಡನ್ನು ದಾಟುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡಲಿಲ್ಲ. ಬದಲಿಗೆ ಅವರನ್ನು ಎದುರಿಸಲು ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಮರುಭೂಮಿಗೆ ಹೊರಟು, ಯಹಚಕ್ಕೆ ಬಂದು, ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಸೀಹೋನನು ಇಸ್ರಾಯೇಲ್ಯರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವದಕ್ಕೆ ಅರಣ್ಯಕ್ಕೆ ಹೊರಟು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |