Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:24 - ಪರಿಶುದ್ದ ಬೈಬಲ್‌

24 ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ಅವನ ಜನರನ್ನು ಸೋಲಿಸಿದರು, ಕತ್ತಿಯಿಂದ ಸಂಹರಿಸಿದರು. ಅರ್ನೋನ್ ಹೊಳೆಯಿಂದ ಯಬ್ಬೋಕ್ ಹೊಳೆಯವರೆಗೂ ಹಾಗೂ ಅಮ್ಮೋನಿಯರ ಎಲ್ಲೆಯವರೆಗೂ ಇದ್ದ ಸೀಹೋನನ ನಾಡನ್ನೆಲ್ಲಾ ಸ್ವಾಧೀನ ಮಾಡಿಕೊಂಡರು. ಅಮ್ಮೋನಿಯರ ಎಲ್ಲೆ ಒಂದು ದುರ್ಗವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಅವನ ಜನರನ್ನು ಸೋಲಿಸಿ ಕತ್ತಿಯಿಂದ ಸಂಹರಿಸಿ ಅರ್ನೋನ್‍ಹೊಳೆ ಮೊದಲುಗೊಂಡು ಯಬ್ಬೋಕ್ ಹೊಳೆಯವರೆಗೂ ಅಮ್ಮೋನಿಯರ ಮೇರೆಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅಮ್ಮೋನಿಯರ ಮೇರೆ ಬಲವುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:24
24 ತಿಳಿವುಗಳ ಹೋಲಿಕೆ  

“ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.


ಆತನು ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.


ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.


ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.


“ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.


ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.


ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ.


ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.


ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.


ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)


“ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.


ಯೆಹೋವನು ಇಸ್ರೇಲರಿಗೆ, “ಈಜಿಪ್ಟಿನವರು, ಅಮೋರಿಯರು, ಅಮ್ಮೋನಿಯರು ಮತ್ತು ಫಿಲಿಷ್ಟಿಯರು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ. ನಾನು ನಿಮ್ಮನ್ನು ಅವರಿಂದ ರಕ್ಷಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು