Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:26 - ಪರಿಶುದ್ದ ಬೈಬಲ್‌

26 ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ಆ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೆಷ್ಬೋನ್ ಪಟ್ಟಣ ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಹಿಂದಿನ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ನಾಡನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:26
13 ತಿಳಿವುಗಳ ಹೋಲಿಕೆ  

ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು.


ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ: “ಹೆಷ್ಬೋನಿಗೆ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ.


ಇಸ್ರೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರೋಯೇರ್ ನಗರ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಅರ್ನೋನ್ ನದಿತೀರದ ಎಲ್ಲ ನಗರಗಳಲ್ಲಿಯೂ ಮುನ್ನೂರು ವರ್ಷಗಳಿಂದ ವಾಸಮಾಡುತ್ತಲಿದ್ದಾರೆ. ಈ ನಗರಗಳನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳಲು ನೀವು ಇಷ್ಟು ವರ್ಷ ಏಕೆ ಪ್ರಯತ್ನ ಮಾಡಲಿಲ್ಲ?


ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬತ್‌ರಬ್ಬೀಮ್‌ನ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.


ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್‌ಬಾಳ್, ಬೇತ್ಬಾಳ್ಮೆಯೋನ್,


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಷ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ!


ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.


“ಮೋವಾಬು ಹಾಳಾಗುವುದು; ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು