Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:29 - ಪರಿಶುದ್ದ ಬೈಬಲ್‌

29 ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ; ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತಲ್ಲಾ. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:29
12 ತಿಳಿವುಗಳ ಹೋಲಿಕೆ  

ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.


“ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.


ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು.


ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು