ಅರಣ್ಯಕಾಂಡ 21:33 - ಪರಿಶುದ್ದ ಬೈಬಲ್33 ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಸ್ರಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಬಾಷಾನಿನ ಅರಸ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧ ಯುದ್ಧಮಾಡಲು ಎದ್ರೈವೂರಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಅಧ್ಯಾಯವನ್ನು ನೋಡಿ |