Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:34 - ಪರಿಶುದ್ದ ಬೈಬಲ್‌

34 ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:34
24 ತಿಳಿವುಗಳ ಹೋಲಿಕೆ  

ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.


ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ.


ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ಯೆಫ್ತಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ


ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಏನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.


ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


“ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.


“ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’


ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು