ಅರಣ್ಯಕಾಂಡ 21:5 - ಪರಿಶುದ್ದ ಬೈಬಲ್5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.