ಅರಣ್ಯಕಾಂಡ 21:7 - ಪರಿಶುದ್ದ ಬೈಬಲ್7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.