ಅರಣ್ಯಕಾಂಡ 21:8 - ಪರಿಶುದ್ದ ಬೈಬಲ್8 ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.