ಅರಣ್ಯಕಾಂಡ 21:9 - ಪರಿಶುದ್ದ ಬೈಬಲ್9 ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.