ಅರಣ್ಯಕಾಂಡ 22:11 - ಪರಿಶುದ್ದ ಬೈಬಲ್11 ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |