ಅರಣ್ಯಕಾಂಡ 22:17 - ಪರಿಶುದ್ದ ಬೈಬಲ್17 ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು. ಅಧ್ಯಾಯವನ್ನು ನೋಡಿ |
ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.