Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:19 - ಪರಿಶುದ್ದ ಬೈಬಲ್‌

19 ಆದ್ದರಿಂದ ನೀವೂ ಸಹ ಇತರ ಹಿರಿಯರಂತೆ ಈ ರಾತ್ರಿ ಇಲ್ಲೇ ಇರಬೇಕು. ಯೆಹೋವನು ನನಗೆ ಇನ್ನೂ ಹೇಳಬೇಕಾದದ್ದನ್ನು ಈ ರಾತ್ರಿ ತಿಳಿದುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಕೂಡ ಈ ರಾತ್ರಿ ಇಲ್ಲೇ ತಂಗಿರಿ, ಸರ್ವೇಶ್ವರ ಏನು ಹೇಳುತ್ತಾರೋ ಅದನ್ನು ತಿಳಿದುಕೊಳ್ಳುತ್ತೇನೆ,” ಎಂದು ಬಾಲಾಕನು ದೂತರಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನೀವೂ ಕೂಡ ಈ ರಾತ್ರಿ ಇಲ್ಲೇ ಇರ್ರಿ; ಯೆಹೋವನು ಈಗ ಏನು ಹೇಳುವನೋ ಅದನ್ನು ನಾನು ತಿಳಿದುಕೊಳ್ಳುತ್ತೇನೆ ಎಂದು ಬಾಲಾಕನ ಸೇವಕರಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:19
7 ತಿಳಿವುಗಳ ಹೋಲಿಕೆ  

ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು