ಅರಣ್ಯಕಾಂಡ 22:23 - ಪರಿಶುದ್ದ ಬೈಬಲ್23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಕಡೆ ಹೋಯಿತು; ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು. ಅಧ್ಯಾಯವನ್ನು ನೋಡಿ |