ಅರಣ್ಯಕಾಂಡ 22:32 - ಪರಿಶುದ್ದ ಬೈಬಲ್32 ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ. ಅಧ್ಯಾಯವನ್ನು ನೋಡಿ |