Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:33 - ಪರಿಶುದ್ದ ಬೈಬಲ್‌

33 ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದುಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಈ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಪಕ್ಕಕ್ಕೆ ತಿರುಗಿಕೊಂಡಿತು. ಹಾಗೇ ತಿರುಗಿಕೊಳ್ಳದೆ ಹೋಗಿದ್ದರೆ ನಿನ್ನನ್ನು ಕೊಂದು ಕತ್ತೆಯನ್ನು ಉಳಿಸುತ್ತಿದ್ದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಒತ್ತಟ್ಟಿಗೆ ತಿರುಗಿಕೊಂಡಿತು; ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಕೊಂದುಹಾಕಿಬಿಡುತ್ತಿದ್ದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:33
5 ತಿಳಿವುಗಳ ಹೋಲಿಕೆ  

ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು