Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:5 - ಪರಿಶುದ್ದ ಬೈಬಲ್‌

5 ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:5
15 ತಿಳಿವುಗಳ ಹೋಲಿಕೆ  

ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


“‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.


ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.


ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.


ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.


ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು