Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:6 - ಪರಿಶುದ್ದ ಬೈಬಲ್‌

6 ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:6
23 ತಿಳಿವುಗಳ ಹೋಲಿಕೆ  

ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.


“‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.


ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು.


ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು.


ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.


“‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.


ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು