ಅರಣ್ಯಕಾಂಡ 23:1 - ಪರಿಶುದ್ದ ಬೈಬಲ್1 ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.
ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.