Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:19 - ಪರಿಶುದ್ದ ಬೈಬಲ್‌

19 ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:19
36 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


“ನಾನು ದೇವರಾದ ಯೆಹೋವನು. ನಾನು ಬದಲಾಗದ ದೇವರು. ನೀವು ಯಾಕೋಬನ ಮಕ್ಕಳು. ನೀವು ಸಂಪೂರ್ಣವಾಗಿ ನಾಶ ಹೊಂದಲಿಲ್ಲ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ನನ್ನ ಪವಿತ್ರತ್ವದ ಮೇಲೆ ಆಣೆಯಿಟ್ಟು ದಾವೀದನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದೆನು. ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.


ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.


ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.


ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.”


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


“ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.


ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:


ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ, ಬದಲಾಯಿಸುವುದೂ ಇಲ್ಲ.


ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.


ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.


ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.


ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”


ಇದೆಲ್ಲವೂ ಅರಸನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದನು. ಆತನು ಕಾರ್ಯರೂಪಕ್ಕೆ ತರದ ವಾಗ್ದನವೇ ಉಳಿಯಲಿಲ್ಲ. ಪ್ರತಿಯೊಂದು ವಾಗ್ದಾನವೂ ನೆರವೇರಿತು.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’” ಎಂದು ಹೇಳಿದನು.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.


ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು