Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:2 - ಪರಿಶುದ್ದ ಬೈಬಲ್‌

2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯಜ್ಞಪೀಠದ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗ ಹೋಮವಾಗಿ ಸಮರ್ಪಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:2
6 ತಿಳಿವುಗಳ ಹೋಲಿಕೆ  

ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.


ಹಬ್ಬದ ಏಳು ದಿವಸಗಳಲ್ಲಿಯೂ ರಾಜನು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು