Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:23 - ಪರಿಶುದ್ದ ಬೈಬಲ್‌

23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:23
31 ತಿಳಿವುಗಳ ಹೋಲಿಕೆ  

ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.


ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.


“ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.


ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.


ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.


“ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕೃತ್ಯಗಳನ್ನು ಮಾಡಿದ್ದೇವೆ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.


ನಾನು, ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪ ಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು