ಅರಣ್ಯಕಾಂಡ 23:27 - ಪರಿಶುದ್ದ ಬೈಬಲ್27 ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಬಾಲಾಕನು ಬಿಳಾಮನಿಗೆ - ಬೇರೊಂದು ಸ್ಥಳಕ್ಕೆ ನಿನ್ನನ್ನು ಕರಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವದಕ್ಕೆ ಒಂದು ವೇಳೆ ದೇವರು ಅನುಮತಿಸಾನು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು. ಅಧ್ಯಾಯವನ್ನು ನೋಡಿ |