ಅರಣ್ಯಕಾಂಡ 23:3 - ಪರಿಶುದ್ದ ಬೈಬಲ್3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು. ಅಧ್ಯಾಯವನ್ನು ನೋಡಿ |