Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:30 - ಪರಿಶುದ್ದ ಬೈಬಲ್‌

30 ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಾಲಾಕನು ಅಂತೆಯೇ ಮಾಡಿ ಪ್ರತಿಯೊಂದು ಪೀಠದಲ್ಲೂ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:30
7 ತಿಳಿವುಗಳ ಹೋಲಿಕೆ  

ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು.


ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಬಾಲಾಕನು ಹೋರಿಗಳನ್ನು ಮತ್ತು ಕುರಿಗಳನ್ನು ವಧಿಸಿ ಯಜ್ಞಮಾಡಿ ಅದರಲ್ಲಿ ಸ್ವಲ್ಪ ಭಾಗವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಪ್ರಧಾನರಿಗೂ ಕೊಟ್ಟನು.


ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು