Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:7 - ಪರಿಶುದ್ದ ಬೈಬಲ್‌

7 ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:7
31 ತಿಳಿವುಗಳ ಹೋಲಿಕೆ  

ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ಆಗ ಅವನು ದೇವರಾತ್ಮ ಪ್ರೇರಿತನಾಗಿ ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.


ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.


ಯೋಬನು ಮಾತನ್ನು ಮುಂದುವರಿಸಿ ಹೀಗೆಂದನು:


ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.


ಆಗ ಬಿಳಾಮನು ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯನಾಯಕರು ಕೇಳಿ ತಮ್ಮನ್ನು ಕುರಿತಾಗಿಯೇ ಇದನ್ನು ಹೇಳಿದನೆಂದು ತಿಳಿದುಕೊಂಡು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರೂ ಜನರಿಗೆ ಹೆದರಿಕೊಂಡು ಆತನನ್ನು ಬಿಟ್ಟುಹೋದರು.


ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಬಳಿಕ ಯೋಬನು ತನ್ನ ಮಾತನ್ನು ಮುಂದುವರಿಸಿದನು:


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


“ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.


ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)


ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.


ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.


ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.


ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರಕೊಟ್ಟನು.


ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್‌ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.


ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು.


ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು