Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:1 - ಪರಿಶುದ್ದ ಬೈಬಲ್‌

1 ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರಿಗೆ ಶುಭವಾಗಬೇಕೆಂಬದೇ ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನನೋಡುವದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:1
13 ತಿಳಿವುಗಳ ಹೋಲಿಕೆ  

ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.


ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.


ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.


ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.


ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅಪ್ಪಣೆ ಕೊಡುತ್ತಿಲ್ಲ” ಎಂದು ಹೇಳಿದನು.


ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.


ಸೌಲನು ಜೀಫ್ ಅರಣ್ಯಕ್ಕೆ ಹೋದನು. ಇಸ್ರೇಲಿನಲ್ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೀಫ್ ಅರಣ್ಯದಲ್ಲಿ ಹುಡುಕಿದರು.


ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ.


ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು