ಅರಣ್ಯಕಾಂಡ 24:11 - ಪರಿಶುದ್ದ ಬೈಬಲ್11 ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |