ಅರಣ್ಯಕಾಂಡ 24:24 - ಪರಿಶುದ್ದ ಬೈಬಲ್24 ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.” ಅಧ್ಯಾಯವನ್ನು ನೋಡಿ |
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.