Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:6 - ಪರಿಶುದ್ದ ಬೈಬಲ್‌

6 ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರಗಳಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. ನದಿತೀರದಲ್ಲಿರುವ ತೋಟಗಳ ಹಾಗೆಯೂ, ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:6
16 ತಿಳಿವುಗಳ ಹೋಲಿಕೆ  

ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


“ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು