Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:1 - ಪರಿಶುದ್ದ ಬೈಬಲ್‌

1 ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:1
22 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


“ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.


“ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.”


“ಅಂತೆಯೇ ನಾವು ಬೇತ್‌ಪೆಗೋರಿನ ಎದುರಿಗಿರುವ ಕಣಿವೆಯಲ್ಲಿ ಇಳಿದುಕೊಂಡೆವು.”


“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.


ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.


ಪೆಗೋರ್‌ನಲ್ಲಿ ಏನಾಯಿತೆಂಬುದನ್ನು ಸ್ಮರಿಸಿಕೊಳ್ಳಿ ಆ ಪಾಪಕ್ಕಾಗಿ ನಾವು ಇನ್ನೂ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ದೇವರು ನಮ್ಮಲ್ಲಿ ಬಹಳಷ್ಟು ಜನರನ್ನು ರೋಗಗ್ರಸ್ತರನ್ನಾಗಿ ಮಾಡಿದನು. ಆ ರೋಗದಿಂದ ಇಂದಿಗೂ ನಾವು ಕಷ್ಟಪಡುತ್ತಿದ್ದೇವೆ.


ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.


ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು.


ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು