Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:13 - ಪರಿಶುದ್ದ ಬೈಬಲ್‌

13 ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:13
34 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಆ ಯಾಜಕರು ಸದಾಕಾಲ ನನ್ನ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನ್ನು ಮಾಡುವರು.”


ಫೀನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು.


ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.


ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.


ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ.


ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು.


ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.


ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದ್ದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.


ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.


“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು