ಅರಣ್ಯಕಾಂಡ 25:14 - ಪರಿಶುದ್ದ ಬೈಬಲ್14 ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿ |
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.